Monday 23 January 2012

ಮಕ್ಕಳ ಜ್ಞಾಪಕ ಶಕ್ತಿ ಹೆಚ್ಚಿಸುವುದು ಹೇಗೆ?

ಮಕ್ಕಳಲ್ಲಿ ಜ್ಞಾಪಕ ಶಕ್ತಿಯ ಕೊರತೆ ಅವರ ಶಿಕ್ಷಣ ಮತ್ತು ವೈಯ್ಯಕ್ತಿಕ ಬದುಕಿನ ಮೇಲೂ ಪರಿಣಾಮ ಬೀರುತ್ತದೆ. ಜ್ಞಾಪಕ ಶಕ್ತಿಯ ಕೊರತೆ ಮಕ್ಕಳ ಆತ್ಮವಿಶ್ವಾಸವನ್ನೂ ಕುಂಠಿತಗೊಳಿಸುತ್ತದೆ. ಆದರೆ ಮಕ್ಕಳ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುವ ಕೆಲವು ನೈಸರ್ಗಿಕ ವಿಧಾನವನ್ನು ಇಲ್ಲಿ ನೀಡಲಾಗಿದೆ. ಅವುಗಳನ್ನು ಮಕ್ಕಳಿಗೆ ನೀಡಿದರೆ ಜ್ಞಾಪಕ ಶಕ್ತಿ ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ.

ಜ್ಞಾಪಕ ಶಕ್ತಿ ಹೆಚ್ಚಿಸುವ ವಿಧಾನ:
* ಮೆಂತ್ಯೆ ಸೊಪ್ಪು, ಮೂಲಂಗಿಯನ್ನು ಸಣ್ಣಗೆ ಹೆಚ್ಚಿಕೊಂಡು ಎರಡನ್ನೂ ಮಿಶ್ರಣ ಮಾಡಿ ಅದಕ್ಕೆ ಉಪ್ಪು, ಮೆಣಸು, ಜೀರಿಗೆಯ ಒಗ್ಗರಣೆ ನೀಡಿ ಸೇವಿಸಿದರೆ ಜ್ಞಾಪಕ ಶಕ್ತಿ ಹೆಚ್ಚುತ್ತದೆ. ಇದನ್ನು ಹಸಿಯಾಗೂ ಸೇವಿಸಬಹುದು, ಇಲ್ಲವೆಂದರೆ ಸ್ವಲ್ಪ ಬೇಯಿಸಿಯೂ ಸೇವಿಸಬಹುದು.
* ಒಂದು ಚೂರು ಹಸಿ ಶುಂಠಿ, ಸ್ವಲ್ಪ ಜೀರಿಗೆ ಮತ್ತು ಕಲ್ಲು ಸಕ್ಕರೆಯನ್ನು ಚೆನ್ನಾಗಿ ಅಗಿದು ತಿನ್ನುತ್ತಿದ್ದರೆ ನಾಲಿಗೆ ರುಚಿ ಹೆಚ್ಚುವುದರ ಜೊತೆ ಜ್ಞಾಪಕ ಶಕ್ತಿಯೂ ವೃದ್ಧಿಸುತ್ತದೆ.
* ಸೇಬನ್ನು ಪ್ರತಿದಿನ ಊಟವಾದ ನಂತರ ನಿರಂತರವಾಗಿ ಸೇವಿಸುತ್ತಿದ್ದರೆ ಜ್ಞಾಪಕ ಶಕ್ತಿ ಹೆಚ್ಚುತ್ತದೆ.
* ನಲ್ಲಿಕಾಯನ್ನು ತಿನ್ನುತ್ತಿದ್ದರೆ ಜ್ಞಾಪಕ ಶಕ್ತಿ ಕ್ರಮೇಣ ಹೆಚ್ಚುತ್ತದೆ.
* ಹಾಲಿಗೆ ಏಲಕ್ಕಿ ಪುಡಿ ಸೇರಿಸಿ ಕುದಿಸಿ ಜೇನು ತುಪ್ಪ ಬೆರೆಸಿ ಮಕ್ಕಳಿಗೆ ನೀಡಿದರೆ ಜ್ಞಾಪಕ ಶಕ್ತಿ ಹೆಚ್ಚುತ್ತದೆ.